ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಇದರ ಬೆನ್ನಲ್ಲೇ ರಾಜ್ಯ ಅರೋಗ್ಯ ಇಲಾಖೆ ಎಚ್ಛೆತ್ತುಕೊಂಡಿದ್ದು, ಕೋವಿಡ್ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಕೋವಿಡ್ ವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ವೈರಲ್ ಫೀವರ್, ILI ಸಾರಿ ಕೇಸ್ ಕಂಡುಬಂದರೆ ಕೋವಿಡ್ ಟೆಸ್ಟ್ ಮಾಡಲಾಗುವುದು. ಕೊವಿಡ್ ಲಕ್ಷಣ ಕಂಡು ಬಂದರೆ ಕೋವಿಡ್ ಪ್ರಮಾಣ ಹೆಚ್ಚಿಸುತ್ತೇವೆ ಎಂದಿದ್ದಾರೆ.
ಈಗಾಗಲೇ 3 ತಿಂಗಳಿಗೆ ಬೇಕಾಗುವಷ್ಟು ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ. 1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ RTPCR ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ. ಡಿ.19ರಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲೂ 58 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಸೋಂಕಿತ 47 ಜನ ಹೋಮ್ ಐಸೋಲೇಷನ್ನಲ್ಲಿದ್ದಾರೆ. ಸೋಂಕಿತ 6 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್ನಲ್ಲಿ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದರು.