ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು ಮಾಡಲಾಗಿದೆ.
ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ(B Nagendra) ಅವರ ನಿರ್ದೇಶನ ಹಿನ್ನೆಲೆ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2.03 ಎಕರೆ ಜಮೀನು ಮಂಜೂರಿಗೆ ಆದೇಶಿಸಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾಹಿತಿ ನೀಡಿದ್ದಾರೆ.
ಈ ಪ್ರಕರಣದ ಸಂಬಂಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ, ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ, ಸಂತ್ರಸ್ತೆ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.