ಅಂದು-ಇಂದು ಒಂದೇ ನಿಲುವು: ವಿಷ್ಣುವರ್ಧನ್‌ ಪುಣ್ಯಭೂಮಿ ಹೋರಾಟಕ್ಕೆ ಕಿಚ್ಚ ಸುದೀಪ್‌ ಬೆಂಬಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಪುಣ್ಯಭೂಮಿಗಾಗಿ ಮತ್ತೆ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಬೆಂಬಲ ನೀಡಿದ್ದಾರೆ.

ವಿಷ್ಣು ಸಮಾಧಿ, ಸ್ಮಾರಕ ವಿಚಾರವಾಗಿ ಕಿಚ್ಚ ಸುದೀಪ್‌ ತಡರಾತ್ರಿ ಟ್ವೀಟ್‌ ಮಾಡಿದ್ದು, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಎಕ್ಸ್‌ನಲ್ಲಿ ಸುದೀಪ್‌ ಪೋಸ್ಟ್‌ ಹಾಕಿದ್ದಾರೆ.

ಶನಿವಾರ ತಡರಾತ್ರಿ 12:40 ಕ್ಕೆ ಸುದೀಪ್‌ ಈ ಪೋಸ್ಟ್‌ ಹಾಕಿದ್ದಾರೆ. ಆ ಮೂಲಕ ವಿಷ್ಣುವರ್ಧನ್‌ ಅಭಿಮಾನಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!