ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಯುವತಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ‘ಪುಷ್ಪ’ ಸಿನಿಮಾ ನಟ ಜಗದೀಶ್ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ.
ನ.29ರಂದು ಆತ್ಮಹತ್ಯೆ ಮಾಡಿಕೊಂಡ ಯುವತಿಯ ಸಾವಿಗೆ ಜಗದೀಶ್ ಕಾರಣ ಎಂದು ಮೃತಳ ತಂದೆ ಸಲ್ಲಿಸಿರುವ ದೂರಿನ ಆಧಾರದ ಮೇಲೆ ಪಂಜಗುಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಟನನ್ನು ಬಂಧಿಸಿದ್ದರು. ಬಳಿಕ ವಿಚಾರಣೆ ನಡೆಸಿದಾಗ ಜಗದೀಶ್ ತಮ್ಮ ತಪ್ಪನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳ 27ರಂದು ಬೇರೆ ಪುರುಷನ ಜೊತೆಗಿದ್ದ ಯುವತಿಯ ಫೋಟೋಗಳನ್ನು ಜಗದೀಶ್ ಆಕೆಗೆ ತಿಳಿಯದಂತೆ ಕ್ಲಿಕ್ಕಿಸಿಕೊಂಡಿದ್ದ. ನಂತರ ಆಕೆಗೆ ಬೆದರಿಕೆ ಹಾಕಿದ್ದಾನೆ ಎಂಬ ವಿಚಾರ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು. ಈ ಬಗ್ಗೆ ಜಗದೀಶ್‌ನನ್ನು ಪ್ರಶ್ನಿಸಿದ್ದು, ‘ನಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬ ವ್ಯಕ್ತಿಯೊಂದಿಗೆ ಆತ್ಮೀಯವಾಗಿರುವುದನ್ನು ನೋಡಿ ನನಗೆ ಸಹಿಸಲು ಸಾಧ್ಯವಾಗಲಿಲ್ಲ. ಅವರ ಅನುಮತಿಯಿಲ್ಲದೇ ನಾನು ಫೋಟೋಗಳನ್ನು ಕ್ಲಿಕ್ಕಿಸಿಕೊಂಡೆ. ಆ ಅಶ್ಲೀಲ ಫೋಟೋಗಳನ್ನು
ಆಕೆಗೆ ಕಳುಹಿಸಿ ಬೆದರಿಕೆ ಹಾಕಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.