ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, 90 ಮಂದಿ ಮೃತಪಟ್ಟಿದ್ದಾರೆ.
ಭಾನುವಾರ ನಡೆದ ದಾಳಿ ಇದಾಗಿದ್ದು, 100 ಕ್ಕೂ ಹೆಚ್ಚು ಮಂದಿ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಜಬಾಲಿಯಾದ ಅಲ್ ಬರ್ಶ್, ಅಲ್ವಾನ್‌ಗಳಿಗೆ ಸೇರಿದ ವಸತಿ ಸಂಕೀರ್ಣಗಳ ಮೇಲೆ ದಾಳಿ ನಡೆದಿದೆ.
ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು ಹಾಗೂ ಮಹಿಳೆಯರು ಎಂದು ಹೇಳಲಾಗಿದೆ. ಅವಶೇಷಗಳಡಿ ಸಾಕಷ್ಟು ಮೃತದೇಹಗಳು ಸಿಲುಕಿರಬಹುದು ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.