ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್ ಆಗಿದೆ.
ವಿಷಪ್ರಾಶನದಿಂದಾಗಿ ಎರಡು ದಿನಗಳ ಹಿಂದೆ ದಾವೂದ್‌ನನ್ನು ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದೀಗ ವಿಷ ಹಾಕಿ ಕೊಲ್ಲಲಾಗಿದೆ ಎನ್ನುವ ವಿಷಯ ವೈರಲ್ ಆಗುತ್ತಿದೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಸಾಕಷ್ಟು ಪೋಸ್ಟ್‌ಗಳು ವೈರಲ್ ಆಗಿದೆ. ಆದರೆ ಪಾಕಿಸ್ತಾನಿ ಮೀಡಿಯಾ ಈ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ನೀಡಿಲ್ಲ. ಪೊಲಿಟಿಕಲ್ ಮಸ್ತಿ ಎಂಬ ಟ್ವಿಟರ್ ಖಾತೆಯಲ್ಲಿ ದಾವೂದ್ ಮೃತಪಟ್ಟು ಒಂದು ಗಂಟೆ ಕಳೆದಿದೆ ಎಂದು ಟ್ವೀಟ್ ಮಾಡಲಾಗಿದೆ.
ಸದ್ಯ ಪಾಕಿಸ್ತಾನದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಕಳೆದ ಕೆಲ ದಿನಗಳಿಂದಲೂ ಇಂಟರ್ನೆಟ್ ಸಮಸ್ಯೆ ಎದುರಾಗಿತ್ತು. ಇದೀಗ ಇಂಟರ್ನೆಟ್ ಬಂದ್ ಮಾಡಲಾಗಿದೆ ಎನ್ನಲಾಗಿದೆ.