ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಳಿಗಾಲದ ಅಧಿವೇಶನದಲ್ಲಿ ಸ್ಪೀಕರ್ ಓಂ ಬಿರ್ಲಾ 31 ಸಂಸದರನ್ನು ಅಮಾನತುಗೊಳಿಸಿದ್ದಾರೆ.
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಏರಿದಂತೆ 31 ವಿಪಕ್ಷ ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತು ಮಾಡಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರತಾ ಲೋಪದ ಬಗ್ಗೆ ಮಾತನಾಡಬೇಕು ಎಂದು ಸದನದೊಳಗೆ ಫಲಕ ಪ್ರದರ್ಶಿಸಿ, ಪ್ರತಿಭಟನೆ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈವರೆಗೆ 47 ವಿಪಕ್ಷ ಸಂಸದರನ್ನು ಉಭಯ ಸದನಗಳಿಂದ ಅಮಾನತುಗೊಳಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.