ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ: ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಶ್ರೀಮತಿ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನಾಯ್ಡು ಈ ಸಮಿತಿಯಲ್ಲಿ ಇರುವರು.

ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ಕೊಟ್ಟು ವಾಸ್ತವಾಂಶಗಳ ಪರಿಶೀಲಿಸಿ ಈ ಸಮಿತಿಯು ರಾಜ್ಯಾಧ್ಯಕ್ಷರಿಗೆ ವರದಿ ಕೊಡಲಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!