ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಕೊರೋನಾ ವೈರಸ್ ರೂಪಾಂತರಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೋವಿಡ್ ಗೈಡ್ಲೈನ್ಸ್ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ RT-PCR, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಿದೆ.
ಐಎಲ್ಐ, ಸ್ಯಾರಿ ಕೇಸ್ಗಳ ಮೇಲೆ ನಿಗಾ ಇಡಲು ಚಿಕಿತ್ಸೆಗೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ. RT-PCR ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಹೊಣೆ ನೀಡಿದೆ.
ಹೆಚ್ಚಿನ ಸಂಖ್ಯೆಯ RT-PCR ಪರೀಕ್ಷೆ ಮಾಡುವುದದು ಮತ್ತು ಜೀನೋಮ್ ಅನುಕ್ರಮಕ್ಕಾಗಿ ಧನಾತ್ಮಕ ಮಾದರಿಗಳನ್ನು ಭಾರತೀಯ SARS COV-2 ಜೀನೋಮಿಕ್ಸ್ ಕನ್ಸೋರ್ಟಿಯಮ್ ಪ್ರಯೋಗಾಲಯಗಳಿಗೆ ಕಳುಹಿಸಿ, ಇದರಿಂದ ದೇಶದಲ್ಲಿ ಯಾವುದಾದರೂ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಸಾಧ್ಯವಾಗುವುದು.
Centre issues advisory to States in view of a recent upsurge in COVID-19 cases and detection of first case of JN.1 variant in India. States urged to maintain a state of constant vigil over the COVID situation. States to report & monitor district-wise SARI and ILI cases on a… pic.twitter.com/NpS1wAQLM8
— ANI (@ANI) December 18, 2023