Tuesday, December 30, 2025

ಹೊಸ ವರ್ಷಾಚರಣೆಗೆ ಹೊರಟ ಬಾಲಿವುಡ್ ನಟಿ ಸನ್ನಿ ಲಿಯೋನ್‌ ಗೆ ನಿರಾಸೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷ ಆಚರಣೆಗೆ ಕ್ಷಣಗಣನೆ ಬಾಕಿ ಇದ್ದು, ಸಿನಿಮಾ ನಟ ನಟಿಯರಿಗೆ ಬಿಡುವಿಲ್ಲದ ಕಾರ್ಯಕ್ರಮಗಳು ಆಯೋಜನೆ ಮಾಡಲಾಗುತ್ತದೆ. ಈ ಪೈಕಿ ಸನ್ನಿ ಲಿಯೋನ್‌ ಕಾರ್ಯಕ್ರಮಕ್ಕೆ ದೇಶಾದ್ಯಂತ ಭಾರಿ ಬೇಡಿಕೆ. ಹೀಗೆ ಕೋಟಿ ಕೋಟಿ ರೂಪಾಯಿ ನೀಡಿ ಹೊಸ ವರ್ಷ ಸಂಭ್ರಮಾಚರಣೆಗೆ ಸನ್ನಿ ಲಿಯೋನ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಈ ಕಾರ್ಯಕ್ರಮ ರದ್ದಾಗಿದೆ.

ಉತ್ತರ ಪ್ರದೇಶದ ಮಥುರಾದ ಖಾಸಗಿ ಹೊಟೆಲ್‌ನಲ್ಲಿ ಹೊಸ ವರ್ಷದ ಸಂಭ್ರಮ ಹೆಚ್ಚಿಸಲು ಬಾಲಿವುಡ್ ನಟಿ ಸನ್ನಿ ಲಿಯೋನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಿಸೆಂಬರ್ 31ರ ರಾತ್ರಿ ಈ ಕಾರ್ಯಕ್ರಮ ನಿಗದಿಯಾಗಿತ್ತು.ಹೊಟೆಲ್ ಮ್ಯಾನೇಜ್ಮೆಂಟ್ ಎಲ್ಲಾ ತಯಾರಿ ಮಾಡಿತ್ತು. ಆದರೆ ಕಾರ್ಯಕ್ರಮಕ್ಕೆ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕಾರ್ಯಕ್ರಮ ರದ್ದು ಮಾಡಲಾಗಿದೆ.

ಖಾಸಗಿ ಹೊಟೆಲ್ ಮಥುರಾದ ಬ್ರಜ್ ಭೂಮಿ ಆವರಣದಲ್ಲಿದೆ. ಇದು ಶ್ರೀಕೃಷ್ಣನ ಮಥುರಾ ದೇವಸ್ಥಾನದ ವ್ಯಾಪ್ತಿಗೆ ಒಳಪಡವ ವೃಂದಾವನದ ಪಕ್ಕದಲ್ಲಿದೆ. ಪವಿತ್ರ ಕ್ಷೇತ್ರದಲ್ಲಿ ಮದ್ಯ, ಕುಣಿತ ಸಂಸ್ಕೃತಿಗೆ ಒಪ್ಪಲು ಸಾಧ್ಯವಿಲ್ಲ ಎಂದು ಸ್ವಾಮೀಜಿಗಳು, ಹಿಂದು ಸಂಘಟನೆಗಳು ವಿರೋಧ ವ್ಯಕ್ತಪಡಿಸಿತ್ತು.

ಮಥುರಾದಲ್ಲಿ ಈ ರೀತಿಯ ಕಾರ್ಯಕ್ರಮ ಹಾಗೂ ಇದಕ್ಕೆ ವ್ಯಕ್ತವಾಗತ್ತಿರುವ ವಿರೋಧಕ್ಕೆ ಉತ್ತರ ಪ್ರದೇಶ ಸರ್ಕಾರ ತಕ್ಷಣ ಪ್ರತಿಕ್ರಿಯಿಸಿದೆ. ಹೀಗಾಗಿ ಕಾರ್ಯಕ್ರಮ ಆಯೋಜಕರು ತಕ್ಷಣವೇ ಹೊಸ ವರ್ಷದ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ. ಕಾರ್ಯಕ್ರಮ ರದ್ದುಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

error: Content is protected !!