ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಸಂಸತ್ ಭವನದಲ್ಲಿ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ಶೀಘ್ರ ಪರಿಹಾರಕ್ಕೆ ಮನವಿ ಮಾಡಿದ್ದಾರೆ.
ರಾಜ್ಯದ ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರಕ್ಕೆ 19,171,44 ಕೋಟಿ ರೂಪಾಯಿ ಹಣ ನೀಡಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಈ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ಹಿಂದೆ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಒಂದು ನಯಾಪೈಸೆ ಪರಿಹಾರ ಬಂದಿಲ್ಲ, ನಾವು ಅವರನ್ನು ಸಂಪರ್ಕಿಸಲು ಹೋದರೆ ನಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಸಿದ್ದರಾಮಯ್ಯ ದೂರಿದ್ದರು.