ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯ ಪ್ರದೇಶ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬೆನ್ನಲ್ಲೇ ವಿಧಾನಸಭೆಯಿಂದ ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ತೆಗೆದುಹಾಕಿದೆ .
ಈ ಕುರಿತು ಸರಕಾರ ವಿರುದ್ಧ ಕಾಂಗ್ರೆಸ್ ಮುಗಿಬಿದಿದ್ದು, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಪುತ್ರ ಮತ್ತು ಕಾಂಗ್ರೆಸ್ ಮುಖಂಡ ಜೈವರ್ಧನ್ ಸಿಂಗ್ ಅವರು, ಬಿಜೆಪಿ ಅಥವಾ ಯಾರೇ ಫೋಟೋ ತೆಗೆದರೂ ಅದು ತಪ್ಪು. ಈ ಬಗ್ಗೆ ಹಂಗಾಮಿ ಸ್ಪೀಕರ್ ಗೋಪಾಲ್ ಭಾರ್ಗವ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.
ಸದನದಿಂದ ಜವಾಹರಲಾಲ್ ನೆಹರು ಫೋಟೋ ತೆಗೆದಿರುವುದು ವಿಷಾದನೀಯ ಎಂದಿರುವ ಕಾಂಗ್ರೆಸ್ ನಾಯಕ, ಒಂದಾಗಿದ್ದ ಭಾರತ ಮತ್ತು ಪಾಕಿಸ್ತಾನಕ್ಕೆ ಒಟ್ಟಿಗೆ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಪಾಕಿಸ್ತಾನದ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ.ಜವಾಹರಲಾಲ್ ನೆಹರು ಅವರಿಂದಾಗಿ ಭಾರತದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿಯಾಗಿದೆ. ಬಿಜೆಪಿ ಅಥವಾ ಬೇರೆ ಯಾರೇ ನೆಹರು ಫೋಟೋ ತೆಗೆದರೂ ಅದು ತಪ್ಪಾಗುತ್ತದೆ. ನಾನು ಹಂಗಾಮಿ ಸ್ಪೀಕರ್ ಜೊತೆ ಚರ್ಚಿಸುತ್ತೇನೆ ಎಂದು ಜೈವರ್ಧನ್ ಸಿಂಗ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ತೆಗೆದು, ಆ ಸ್ಥಳದಲ್ಲಿ ಭೀಮರಾವ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಲಾಗಿದೆ.