ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಿಂತಿದ್ದ ಲಾರಿಗೆ ಕಾರ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.
ಇದರಿಂದಾಗಿ ಕಾರ್‌ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಮೇಜಾನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ನಿದ್ದೆ ಮಂಪರಿನಲ್ಲಿ ಲಾರಿಗೆ ಡಿಕ್ಕಿಹೊಡೆದಿದ್ದಾರೆ ಎನ್ನಲಾಗಿದೆ.
ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.