ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೊರೋನಾ ಮತ್ತೆ ಸದ್ದು ಮಾಡುತ್ತಿದೆ. ದೇಶದಲ್ಲಿ ಒಟ್ಟಾರೆ 20 ಜೆಎನ್1 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕೆಲ ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಕೊರೋನಾದಿಂದಾಗಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಾಜ್ಯದ ಆರೋಗ್ಯ ಸಚಿವರು ಮಾತನಾಡಿ ಕೊರೋನಾ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ವ್ಯಕ್ತಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಅವರಿಗೆ ಬಿಪಿ, ಟಿಬಿ ಹಾಗೂ ಶ್ವಾಸಕೋಶದ ಸಮಸ್ಯೆಯೂ ಇತ್ತು ಎಂದು ಹೇಳಿದ್ದಾರೆ.
ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಉಪತಳಿ ಕೇಸ್ ಪತ್ತೆಯಾಗಿದೆ. ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಟೆಸ್ಟಿಂಗ್ ನಡೆಯುತ್ತಿದೆ. ಮಂಗಳವಾರ ಒಂದೇ ದಿನ 727 ಟೆಸ್ಟಿಂಗ್ ನಡೆದಿದೆ ಎಂದಿದ್ದಾರೆ.