ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಕೋವಿಡ್ ಉಲ್ಬಣವಾಗಿದ್ದು, ಕೇರಳದಿಂದ ಬರುವ ಹಾಗೂ ಕೇರಳಕ್ಕೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಣೆ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಕೇರಳದಲ್ಲಿ ಕೋವಿಡ್ ಹೆಚ್ಚಾಗುತ್ತಿದ್ದು, ರಾಜ್ಯಕ್ಕೂ ಬಾಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಸ್‌ಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ. ಜೊತೆಗೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.