ಸೂರಜ್ ರೇವಣ್ಣಗೆ ಬಿಗ್ ರಿಲೀಫ್: ಅನರ್ಹ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೂರಜ್ ರೇವಣ್ಣ (Suraj Revanna) ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court )ವಜಾ ಮಾಡಿದೆ.

ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ ದೇವರಾಜೇಗೌಡ ಎನ್ನುವರುಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣರನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠ ಇಂದು(ಡಿಸೆಂಬರ್ 20) ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ಸಿಕ್ಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!