ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಸೇರಿದಂತೆ 12 ಆರೋಪಿಗಳ ವಿರುದ್ಧ ಸಿಐಡಿ ಪೊಲೀಸರು ಕೋಕಾ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ-2000) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಮುಖ ಆರೋಪಿ ಆರ್ ಡಿ. ಪಾಟೀಲ್, ಸಂತೋಷ್ ಕೊಟ್ಟಳ್ಳಿ, ಶಿವಕುಮಾರ್, ಸಿದ್ರಾಮ ಕೋಳಿ, ರವಿಕುಮಾರ್, ರುದ್ರಗೌಡ, ರಹೀಂ ಚೌದರಿ, ಸಾಗರ್, ಬಸಣ್ಣ ಪೂಜಾರಿ, ಚಂದ್ರಕಾಂತ್ ಬುರಕಲ್, ಶಶಿಧರ್ ಜಮಾದಾರ್, ಬಸವರಾಜ ಎಳವಾದ ವಿರುದ್ಧ ಕೋಕಾ ಆಕ್ಟ್ ಜಾರಿ ಮಾಡಲಾಗಿದೆ.
ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ನಕಲಿ ಕೇಸ್ನಲ್ಲಿ ಸಿಕ್ಕಿಬಿದ್ದಿರುವ ಆರ್.ಡಿ.ಪಾಟೀಲ್ ವಿರುದ್ಧ ಇರುವ ಎಲ್ಲಾ ಕೇಸ್ ಗಳ ಮಾಹಿತಿ ಸಂಗ್ರಹಿಸಿ ಕೋಕಾ ಕಾಯಿದೆ ಜಾರಿ ಮಾಡಲಾಗಿದೆ. ಗುಂಪು ಕಟ್ಟಿಕೊಂಡು ಪದೇ ಪದೇ ಒಂದೇ ರೀತಿಯ ಅಪರಾಧಗಳನ್ನ ಮಾಡುವವರ ವಿರುದ್ಧ ಕೋಕಾ ಕಾಯಿದೆ ಜಾರಿ ಮಾಡಲಾಗುತ್ತದೆ. ಕೋಕಾ (Karnataka Control of Organised Crimes Act 2000-KCOCA) ಜಾರಿಯಿಂದಾಗಿ ಆರೋಪಿಗೆ ಜಾಮೀನು ಸಿಗುವುದು ಮತ್ತಷ್ಟು ಕಷ್ಟವಾಗಿದೆ. ಜೈಲಿನಿಂದ ಹೊರಬಂದು ಪದೇ ಪದೇ ಪರೀಕ್ಷಾ ಅಕ್ರಮಗಳಲ್ಲಿ ಆರ್ಡಿ ಪಾಟೀಲ್ ಭಾಗಿಯಾಗಿದ್ದನು.