ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಪ್ರಕರಣ: ದೆಹಲಿಯಲ್ಲಿ ನಾಲ್ವರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಡೀಫ್ ಫೇಕ್ ವಿಡಿಯೋ ಪ್ರಕರಣ ದೇಶದಲ್ಲಿ ಹೆಚ್ಚುತ್ತಿದ್ದು, ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಅಪ್ಲೋಡ್ ಮಾಡಿದ ನಾಲ್ವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ವರ ಪೈಕಿ ಮೂವರ ಮಾಹಿತಿಯನ್ನು ಫೇಸ್‌ಬುಕ್ ಮೆಟಾ ನೀಡಿತ್ತು. ಈ ಮಾಹಿತಿ ಪಡೆದ ದೆಹಲಿ ಸೈಬರ್ ಪೊಲೀಸರು ಒಟ್ಟು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಡೀಪ್ ಫೇಕ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಪ್ಲೋಡ್ ಮಾಡಿದ ವ್ಯಕ್ತಿಗಳು ವಿಡಿಯೋ ಡಿಲೀಟ್ ಮಾಡಿದ್ದರು.
ಸದ್ಯ ವಶದಲ್ಲಿರುವ ನಾಲ್ವರು ಡೀಪ್ ಫೇಕ್ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಆದರೆ ಈ ವಿಡಿಯೋವನ್ನು ಅಭಿವೃದ್ಧಿಪಡಿಸಿದ ವ್ಯಕ್ತಿಯ ಹುಡುಕಾಟ ನಡೆಯುತ್ತಿದೆ.

ಈಗಾಗಲೇ ಡೀಪ್‌ಫೇಕ್‌ ತಂತ್ರಜ್ಞಾನದ ಅನಾಹುತಗಳನ್ನು ತಡೆಯುವ ಸಂಬಂಧ ಜಾಲತಾಣಗಳ ಜೊತೆ ಸಭೆ ಕೇಂದ್ರ ಸರ್ಕಾರ ಸಭೆ ನಡೆಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!