ಹೊಸದಿಗಂತ ವರದಿ, ದಾವಣಗೆರೆ:
ಐ.ಎನ್.ಡಿ.ಐ.ಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಘೋಷಿಸಿರುವುದು ಕೂಸು ಹುಟ್ಟುವ ಮುನ್ನ ಹೆಸರಿಟ್ಟಂತಾಗಿದೆ ಎಂದು ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿಕೂಟದವರು ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಿತ್ತು. ಚುನಾವಣೆ ಮುಗಿದ ಬಳಿಕ ಆಯ್ಕೆಯಾಗಲಿ ಅಂತಾ ಸ್ವತಃ ಮಲ್ಲಿಕಾರ್ಜುನ ಖರ್ಗೆ ಕೂಡ ಹೇಳಿದ್ದಾರೆ. ಹಾಗಾಗಿ ಚುನಾವಣೆ ಗೆದ್ದ ನಂತರ ಪ್ರಧಾನಿ ಅಭ್ಯರ್ಥಿ ಆಯ್ಕೆ ಬಗ್ಗೆ ಯೋಚನೆ ಮಾಡಬೇಕು. ಆದರೂ, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವುದನ್ನು ಸ್ವಾಗತಿಸುತ್ತೇನೆ ಎಂದರು.