ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷ್ಣಭೈರೇಗೌಡ ಹಾಗೂ ಸಚಿವ ಜಮೀರ್ ಅಹಮದ್ಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ. ಯಾರದ್ದೋ ದುಡ್ಡು, ಎಲ್ಲಮ್ಮನ ಜಾತ್ರೆ, ಜನರ ದುಡ್ಡು ಆಕಾಶದಲ್ಲಿ ಜಾತ್ರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಟೀಕೆ ಮಾಡಿದ್ದಾರೆ.
ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಜನರ ದುಡ್ಡು ಆಕಾಶದಲ್ಲಿ ಜಾತ್ರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ. ಇಂತಹ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಷಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವುದು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ ಎಂದಿದ್ದಾರೆ.