ಮತ್ತೊಂದು ಅಮಾನವೀಯ ಕೃತ್ಯ: ಬೆಂಗಳೂರಿನಲ್ಲಿ ಶಾಲಾ ಮಕ್ಕಳ ಕೈಯಲ್ಲೇ ಟಾಯ್ಲೆಟ್ ಕ್ಲೀನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲಾರ ಜಿಲ್ಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿಯೂ ಪ್ರಕರಣ ಮರುಕಳಿಸಿದೆ.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಕೈಯಲ್ಲಿ ಟಾಯ್ಲೆಟ್ ತೊಳೆಸಿದ್ದಾರೆ.

ಈ ವಿಷಯ ಪೋಷಕರಿಗೆ ತಿಳಿದುಬಂದಿದ್ದು, ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನರ್ ನೀಡಿ ಬರಿಗೈಯಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮನವಿ ಮಾಡಿದ್ದಾರೆ.

ಮಕ್ಕಳು ಓದು ಬರಹ ಕಲಿತು ಮುಂದೆ ಬರಲಿ ಎಂದು ಶಾಲೆಗೆ ಕಳುಹಿಸುತ್ತೇವೆ,ಟಾಯ್ಲೆಟ್ ತೊಳೆಸಲು ಅಲ್ಲ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!