ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ನಟಿ ತ್ರಿಷಾ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ (Mansoor Alikhan) ಗೆ ಮದ್ರಾಸ್ ಹೈಕೋರ್ಟ್ (Madras High Court) ಒಂದು ಲಕ್ಷ ರೂಪಾಯಿ ದಂಡವಿಧಿಸಿದೆ.
ಈ ಹಿಂದೆ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದನು. ಬಳಿಕ ಡಿಢೀರ್ ಅಂತ ಪೊಲೀಸ್ ಠಾಣೆಗೆ ಹಾಜರಾಗಿದ್ದನು.
ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದರು. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಕೂಡ ಆಗಿತ್ತು. ಈಗ ಕೋರ್ಟ್ ಕೂಡ ದಂಡವಿಧಿಸಿದೆ.