ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಕೆರೆ ಏರಿ ಮೇಲಿಂದ ಕೆಳಗೆ ಉರುಳಿಬಿದ್ದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ಮುಖ್ಯ ರಸ್ತೆಯ ಬಿದರಗುಪ್ಪೆ ಕೆರೆ ಏರಿ ಮೇಲೆ ಘಟನೆ ನಡೆದಿದೆ.
ಈ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಖಾಸಗಿ ಬಸ್ ಚಿಕ್ಕ ಬೆಳಂಡೂರಿನಿಂದ ಓಂ ಶಕ್ತಿ ಗೆ ಹೋಗುತ್ತಿತ್ತು.
ಬಸ್‌ನಲ್ಲಿ ೫೦ ಮಂದಿ ಪ್ರಯಾಣ ಮಾಡುತ್ತಿದ್ದರು. ಕೆರೆ ಏರಿ ಮೇಲೆ ಬರುತ್ತಿದ್ದಾಗ ಬಸ್ ನಿಯಂತ್ರಣ ತಪ್ಪಿದೆ. ಅದೃಷ್ಟವಶಾತ್ ಬಸ್ ಬಿದ್ದ ಭಾಗದಲ್ಲಿ ನೀರು ತುಂಬಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.