ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಂಡು ಕೇಳರಿಯದ ಕುಂಭದ್ರೋಣ ಮಳೆಗೆ ತಮಿಳುನಾಡು ಅಕ್ಷರಶಃ ಕಂಗಾಲಾಗಿದ್ದು, ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಗಳ ಸುರಕ್ಷತೆ ಸರ್ಕಾರಕ್ಕೆ ಸವಾಲಾಗಿ ಕಾಡುತ್ತಿದೆ.
ತಿರುನಲ್ವೇಲಿ ಜಿಲ್ಲೆಯಲ್ಲಿ ಅಬ್ಬರಿಸುತ್ತಿರುವ ಮಳೆಗೆ ಎಲ್ಲೆಡೆ ಪ್ರವಾಹ ಪರಿಸ್ಥಿತಿ ಕಾಣಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 696 ಗರ್ಭಿಣಿಯರನ್ನು ಜಿಲ್ಲಾಡಳಿತವು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಬಗ್ಗೆಯೂ ರಕ್ಷಣಾ ಕ್ರಮ ಕೈಗೊಳ್ಳುತ್ತಿದೆ.
ಈಗಾಗಲೇ ಭಾರತೀಯ ನೌಕಾಪಡೆ ತಮಿಳುನಾಡಿಗೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದೆ.