ಲೋಕ ಸಮರ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿ ಕರ್ನಾಟಕ ಸಿಎಂ ಸಿದ್ದುಗೆ ಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್, ತನ್ನ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ಪ್ರಕಟಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಮಿತಿಯಲ್ಲಿ ಸ್ಥಾನ ನೀಡಿದೆ.

ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಛತ್ತೀಸ್‌ಗಢ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್ ಸಿಂಗ್‌ದೇವ್ ಅವರನ್ನು ಆಯ್ಕೆ ಮಾಡಲಾಗಿದ್ದು, ಸಿದ್ದರಾಮಯ್ಯ ಅಲ್ಲದೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ ಹಲವು ನಾಯಕರನ್ನು ಸಮಿತಿಯಲ್ಲಿ ನೇಮಿಸಲಾಗಿದೆ.

ಪಕ್ಷದ ಹಿರಿಯ ನಾಯಕ ಪಿ. ಚಿದಂಬರಂ ನೇತೃತ್ವದಲ್ಲಿ ಪ್ರಣಾಳಿಕೆ ಸಮಿತಿ ಈಗ ಪ್ರಕಟಗೊಂಡಿದ್ದು, ಇದರಲ್ಲಿ 16 ಮಂದಿ ಇದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!