ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಫರಂಗೀಪೇಟೆ ಸಮೀಪದ ಅರ್ಕುಳ ದ್ವಾರದ ಬಳಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿ, ಮಹಿಳೆ ಹಾಗೂ ಮಗು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಸಾವನ್ನಪ್ಪಿದ ದುರ್ದೈವಿಯನ್ನು ಬಂಟ್ವಾಳ ತಾಲೂಕು ಕುಕ್ಕಾಜೆಯ ನಿವಾಸಿ ಹಂಝ ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಹಂಝ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ