ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಹಾಗೂ ವಿಧಾನಪರಿಷತ್‌ನ ವಿವಿಧ ಜವಾಬ್ದಾರಿಗಳನ್ನು ಹಂಚಲಾಗಿದೆ.
ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್. ರವಿ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾಗಿ ಅರವಿಂದ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.