ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಇದರ ನಡುವೆ ಕೋವಿಡ್ ರೂಪಾಂತರಿ ವೈರಸ್ JN.1 ಕರ್ನಾಟಕ್ಕೂ ಎಂಟ್ರಿ ಕೊಟ್ಟಿದೆ.
8 ಜನರಿಗೆ ಕೊರೊನಾ ರೂಪಾಂತರಿ JN.1 ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದೆ. ಮೈಸೂರಿನ 8 ಮಂದಿಯಲ್ಲಿ JN.1 ವೈರಸ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ 8 ಮಂದಿಯ ಸೋಂಕಿತರ ಸಂಪರ್ಕಿತರ ಮಾಹಿತಿ ಕಲೆ ಹಾಕಲಾಗುತ್ತಿದೆ.
ಕೇರಳದಲ್ಲಿ ಕೋವಿಡ್ ರೂಪಾಂತರಿ ಇದೀಗ ರಾಜ್ಯಕ್ಕೂ ಕಾಲಿಟ್ಟಿದ್ದು, ಕ್ರಿಸ್ ಮಸ್, ಹೊಸ ವರ್ಷಾಚರಣೆ ಸಂದರ್ಭದಲ್ಲೇ ಮಹಾಮಾರಿ ಇನ್ನಷ್ಟು ಆತಂಕ ಸೃಷ್ಟಿಸಿದೆ.
ಇತ್ತೀಚಿನ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ರೂಪಾಂತರಿ JN.1 ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.