ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧವಿಲ್ಲ. ಯಾರೂ ಗಾಬರಿಯಾಗಬಾರದು ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸೇರಿದಂತೆ ಸಭೆ, ಸಮಾರಂಭಗಳಿಗೆ ಯಾವುದೇ ನಿರ್ಬಂಧವಿಲ್ಲ.ರಾಜ್ಯದಲ್ಲಿ ಈಗಿರುವ ಮಾರ್ಗಸೂಚಿಯೇ ಮುಂದುವರೆಯಲಿದೆ. ಮುಂದೆ ಏನಾದ್ರೂ ಬದಲಾವಣೆ ಇದ್ರೆ ಮಾಹಿತಿ ನೀಡುತ್ತೇವೆ ಎಂಬುದಾಗಿ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದರೊಂದಿಗೆ, ಕೋವಿಡ್ JN.1ರ ಹೊಸ ರೂಪಾಂತರವು ತುಂಬಾ ವೇಗವಾಗಿ ಹರಡುತ್ತಿದೆ. ಕರ್ನಾಟಕದಲ್ಲಿ 8 ಮಂದಿಯಲ್ಲಿ ಕಾಣಿಸಿಕೊಂಡಿದೆ.