ಹೊಸದಿಗಂತ ವರದಿ,ವಿಜಯಪುರ:
ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂಬ ಹೇಳಿಕೆ ವಿಚಾರ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡಿತ್ತಿವೆ ಎಂದು ಪರೋಕ್ಷವಾಗಿ ತಮ್ಮ ಹೇಳಿಕೆ ಸಚಿವರು ಸಮರ್ಥಿಸಿಕೊಂಡರು.
ನಾನು ರೈತರ ವಿರೋಧಿ ಅಲ್ಲ, ರೈತರ ವಿರೋಧವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಮೂರು ವರ್ಷಕ್ಕೊಮೆ ರೈತರ ಬೆಳೆಗಳಿಗೆ ಬೆಲೆ ಬರುತ್ತದೆ. ಉಳಿದ ಎರಡು ಬೆಲೆ ಇಲ್ಲದೆ ಕಂಗಾಲಾಗಿರುತ್ತಾರೆ. ಹಾಗಾಗಿ ರೈತರು ಸಾಲಮನ್ನಾ ಆಗಲಿ ಎಂದು ಆಶಯ ವ್ಯಕ್ತಪಡಸುತ್ತಾರೆ. ಇತ್ತೀಚಿಗೆ ಕೇಂದ್ರದ ಯೋಜನೆಗಳು ರೈತರಿಗೆ ಮುಳುವಾಗಿವೆ. ನನಗೆ ಮದ ಏರಿದೆ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ ಇದೆಲ್ಲ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರಿಗೆ ರೈತರ ಮೇಲೆ ಕರುಣೆ ಇದ್ದರೆ ಕೇಂದ್ರ ಸರ್ಕಾರದ ನೀತಿಗಳನ್ನು ಬದಲಾಯಿಸಲಿ. ವಿರೋಧ ಪಕ್ಷದ ನಾಯಕರು ರೈತರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೆ ತರಲಿ ಎಂದರು.