ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಸರ್ಕಾರ ಗೊಂದಲದ ಗೂಡಾಗಿದೆ ಎಂಬುದಕ್ಕೆ ಅವರ ಹೇಳಿಕೆಗಳೇ ಸಾಕ್ಷಿ ಹಿಂದಿನ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡಿಲ್ಲ, ಇಂತಹ ಸಂದರ್ಭದಲ್ಲಿ ಮತ್ತೆ ಹಿಜಬ್ ತರುತ್ತೇವೆ ಎನ್ನುತ್ತಿದ್ದಾರೆ. ಒಮ್ಮೆ ತರುತ್ತೇವೆ ಅಂತಾರೆ ಮತ್ತೆ ಹೇಳಿಕೆ ಬದಲಿಸುತ್ತಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಟೀಕಿಸಿದರು.
ಅವರು ಸೋಮವಾರ, ಹಿಜಾಬ್ ಅವಕಾಶ ಕೊಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ನಾಯಕರು ಚುನಾವಣೆಯ ದೃಷ್ಟಿಕೋನದಲ್ಲಿ ಹೇಳಿಕೆ ಕೊಡುತ್ತಾರೆ. ಸರ್ವರನ್ನ ಒಳಗೊಳ್ಳುವ ಆಲೋಚನೆ ರಾಜ್ಯ ಸರ್ಕಾರಕ್ಕೆ ಇಲ್ಲ, ಸಿದ್ದರಾಮಯ್ಯ ಕಾನೂನು, ಕೋರ್ಟ್ ತೀರ್ಪು ಮೀರಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನಡವಳಿಕೆ ರಾಜಕಾರಣಕ್ಕೆ ಭೂಷಣವಲ್ಲ, ಅಲ್ಪಸಂಖ್ಯಾತರನ್ನು ಓಲೈಸಿ ಬಹು ಸಂಖ್ಯಾತರಿಗೆ ಸಡ್ಡುತ್ತಿದ್ದೀರಿ. ಪರಿಷತ್ ನ ಒಳಗೆ ಮತ್ತು ಹೊರಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.