ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ನಲ್ಲಿ ಅನುಮೋದನೆಗೊಂಡ 3 ಹೊಸ ಕಾನೂನುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ನೀಡಿದ್ದಾರೆ. ಈ ಮೂಲಕ ಭಾರತವು ಹೊಸ ಅಪರಾಧ ಕಾನೂನುಗಳನ್ನು ಪಡೆದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಮಸೂದೆಗೆ ಒಪ್ಪಿಗೆ ನೀಡಿದ್ದಾರೆ.
ಭಾರತೀಯ ದಂಡ ಸಂಹಿತೆ(IPC), ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ(CrPC) ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸುವ ಮೂರು ಕ್ರಿಮಿನಲ್ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಹಿ ಹಾಕಿದ್ದಾರೆ.
ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆ ಪಡೆದ ನಂತರ ಭಾರತೀಯ ದಂಡ ಸಂಹಿತೆ(IPC), ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ(CrPC) ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಮೂರು ಕ್ರಿಮಿನಲ್ ಮಸೂದೆಗಳು ಕಾನೂನಾಗಿ ಜಾರಿಗೆ ಬಂದವು.
ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಭಾರತೀಯ ಸಾಕ್ಷಿ ಸಂಹಿತಾ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ 2023 ಮತ್ತು ಭಾರತೀಯ ನ್ಯಾಯ ಸಂಹಿತಾ, 2023 ಅನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದವು.