ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ ಮನೆಮಾಡಿದ್ದು, ಮಾಲಾಧಾರಿಗಳು ದತ್ತಪಾದುಕೆ ದರುಶನ ಪಡೆಯುತ್ತಿದ್ದಾರೆ.
ಇಂದು ದತ್ತಪಾದುಕೆ ದರುಶನಕ್ಕೆ ಕಡೆಯ ದಿನವಾಗಿದ್ದು, ಸಾವಿರಾರು ಮಾಲಾಧಾರಿಗಳು ದತ್ತಪಾದುಕೆ ದರುಶನಕ್ಕೆ ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.
ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದರುಶನ ಪಡೆಯಲಿದ್ದು, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಇಡೀ ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರಿನ ಸೂಕ್ಷ್ಮ ಪ್ರದೇಶಗಳನ್ನು ಬಂದ್ ಮಾಡಲಾಗಿದೆ. ಬಾಬಾಬುಡನ್ ಗಿರಿಯಲ್ಲಿ ದರ್ಗಾಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. ಈವರೆಗೂ ೨೫ ಸಾವಿರಕ್ಕೂ ಹೆಚ್ಚು ಭಕ್ತರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.