ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.
ಚುಂಚಘಟ್ಟ ನಿವಾಸಿ ಮಂಜುನಾಥ್ ಮೃತರು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಉಳಿದ ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿಯ ಹಿಂಬದಿಗೆ ವೇಗವಾಗಿ ಕಾರ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಕಾರು ಚಾಲಕ ಹಾಗೂ ಫ್ರಂಟ್ ಸೀಟ್‌ನಲ್ಲಿ ಕುಳಿತಿದ್ದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್ ಪತ್ನಿ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.