ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಟ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಟ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.
ರಾಮಮಂದಿರದಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬರಬೇಕು ಎಂದು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ನೀಡಲಾಗಿರುವ ಈ ಆಹ್ವಾನವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ರಾಮ ಲಾಲ್ ನೇತೃತ್ವದಲ್ಲಿ ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ತಲುಪಿಸಲಾಗಿದೆ.