ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರೆಂಟಿ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ನಡೆದಿದೆ.
ಯುವತಿಯೊಬ್ಬರನ್ನು ಕರೆಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಯುವನಿಧಿ ಲೊಗೋ ಬಿಡುಗಡೆ ಮಾಡಿದ್ದಾರೆ.
ಇಂದಿನಿಂದ 5ನೇ ಗ್ಯಾರಂಟಿ ಜಾರಿ..
ನಾವು ಭರವಸೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಯ ಅರ್ಜಿ ಸಲ್ಲಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ.
ಡಿಪ್ಲೊಮಾ ಹಾಗೂ ಪದವೀಧರ ಯುವಸಮುದಾಯ ಉದ್ಯೋಗ ದೊರಕುವವರೆಗೆ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.
ಯುವಸಮುದಾಯ ಈ ದೇಶದ ಆಸ್ತಿ, ಆ ಅತ್ಯಮೂಲ್ಯ ಆಸ್ತಿಯನ್ನು ಕಾಪಾಡಿಕೊಳ್ಳುವುದು…
— Karnataka Congress (@INCKarnataka) December 26, 2023