ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಏಪ್ರಿಲ್ ವೇಳೆಗೆ ಬಿಎಂಟಿಸಿಗೆ 1,400 ಎಲೆಕ್ಟ್ರಿಕ್ ಬಸ್‌ಗಳು ಸೇರ್ಪಡೆಯಾಗಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬಳಿ ಬಿಎಂಟಿಸಿ ಆಯೋಜಿಸಿದ್ದ 100 ವಿದ್ಯುತ್ ಚಾಲಿತ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಹಾಗೂ ಜಾಗೃತಿಗಾಗಿ ಹತ್ತು ಬಸ್‌ಗಳಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್‌ನ್ನು ಅಳವಡಿಸಲಾಗಿದೆ ಎಂದಿದ್ದಾರೆ.
ಈವರೆಗೂ ರಾಜ್ಯ ಸಾರಿಗೆ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ನಿತ್ಯ ಬಿಎಂಟಿಸಿಯಲ್ಲಿ 40 ಲಕ್ಷ ಮಹಿಳೆಯರು ಓಡಾಟ ನಡೆಸುತ್ತಿದ್ದಾರೆ. ಬಿಜೆಪಿ ಇಂಥ ಜನಪರ ಯೋಜನೆ ವಿರೋಧವಾಗಿ ಮಾತನಾಡುತ್ತದೆ. ಅವರು ಅಧಿಕಾರದಲ್ಲಿದ್ದಾಗ ಇಂಥ ಯೋಚನೆ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.