ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಈವರೆಗೆ 7 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
36 ಜನರಲ್ಲಿ ರೂಪಾಂತರಿ ವೈರಸ್ JN.1 ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಸೋಂಕಿತರಿಗೆ ಒಂದು ವಾರ ಹೋಂ ಐಸೋಲೇಷನ್ ಕಡ್ಡಾಯ. ಹೋಂ ಐಸೋಲೇಷನ್ ಇರುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದರು.
ಜಿಲ್ಲಾ ಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್ ತೆರೆಯಲಾಗಿದೆ. ಇನ್ನು ನ್ಯೂ ಇಯರ್ ಗೆ ಯಾವುದೇ ಗೈಡ್ ಲೈನ್ ಮಾಡಿಲ್ಲ. ಆರೋಗ್ಯ ದೃಷ್ಟಿಯಿಂದ ಎಲ್ಲರೂ ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ತಿಳಿಸಿದರು.