ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿಯಿಂದ ಸಾಕ್ಷೀ ಮಲಿಕ್ ನಿವೃತ್ತಿ ಘೋಷಿಸಿದ್ದು, ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀ ಯನ್ನು ಹಿಂದಿರುಗಿಸಿದ ಒಂದು ವಾರದಲ್ಲಿ ಅಗ್ರ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನ ಹಿಂದಿರುಗಿಸುವುದಾಗಿ ಘೋಷಿಸಿದ್ದು, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನ ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.