ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗೋದ ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಈವರೆಗೂ 22 ಮಂದಿ ಮೃತಪಟ್ಟಿದ್ದಾರೆ.
ಕಸಾಯಿ ಮಧ್ಯ ಪ್ರಾಂತ್ಯದಲ್ಲಿ ಮಂಗಳವಾರ ಭಾರೀ ಮಳೆ ಸುರಿದಿದೆ. ಪ್ರವಾಹ ಹಾಗೂ ಕೆಲವೆಡೆ ಭೂಕಂಪದಿಂದಾಗಿ 22 ಮಂದಿ ಮೃತಪಟ್ಟಿದ್ದಾರೆ.
ಮನೆಗಳು, ಚರ್ಚ್‌ಗಳು ಏಕಾಏಕಿ ಕುಸಿದುಬಿದ್ದಿವೆ, ಎಷ್ಟೋ ಮಂದಿ ಆಶ್ರಯವಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಮೃತರ ಕುಟುಂಬದವರು ತಮ್ಮವರನ್ನು ಹಾಗೂ ಮನೆಯನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಈ ಬಗ್ಗೆ ಕನಂಗಾ ಮೇಯರ್ ರೋಸ್ ಮುವಾಡಿ ಮುಸುವೆ ಮಾತನಾಡಿದ್ದು, ಎಲ್ಲ ರೀತಿಯ ಸಹಾಯ ಮಾಡುತ್ತಿದ್ದೇವೆ. ಮನೆ ಕಟ್ಟಿಕೊಳ್ಳಲು ಸೂಕ್ತವಲ್ಲದ ಸ್ಥಳಗಳಲ್ಲಿ ಮನೆಗಳನ್ನು ನಿರ್ಮಿಸಿದ್ದೇ ಸಾವಿಗೆ ಕಾರಣವಾಗಿದೆ. ಮೃತರ ಅಂತ್ಯಸಂಸ್ಕಾರಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.