ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವರಿಗೆ ಉಸಿರಾಟದ ತೊಂದರೆ ಎದುರಾಗಿದೆ.
ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ ಎನ್ನೋರ್ನಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಉಸಿರಾಡಲಾಗದೇ ಜನರು ಪರದಾಡಿದ್ದಾರೆ.
ತಕ್ಷಣವೇ ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಮೋನಿಯಾ ದ್ರವ ರೂಪದಲ್ಲಿ ಪಂಪ್ ಮಾಡಲು ಪೈಪ್ಲೈನ್ನಲ್ಲಿ ತಂಪಾಗಿಸುವ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಅನಿಲ ಸೋರಿಕೆ ಆಗಿರಬಹುದು ಎನ್ನಲಾಗಿದೆ.