ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು ಒಣಹವೆ ಮುಂದುವರಿಯಲಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ
ಸಾಧ್ಯತೆಯಿದೆ.ಮುಂದಿನ 24 ತಾಸುಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಇಂದು ಗರಿಷ್ಠ ಉಷ್ಣಾಂಶ 28, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯೆಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ