ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಇಂದು ರಿಲೀಸ್ ಆಗಿದ್ದು, ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.
ಸಿನಿಮಾ ಆರಂಭದಲ್ಲಿ ಅಂಬಾರಿ ಹೊತ್ತ ಅರ್ಜುನನಿಗೆ ಸಿನಿಮಾ ಸಮರ್ಪಣೆ ಎಂದು ಹೇಳಲಾಗಿದ್ದು, ಅಭಿಮಾನಿಗಳ ಮನಸ್ಸನ್ನು ಸಿನಿಮಾ ಇಲ್ಲಿಂದಲೇ ಗೆಲ್ಲೋಕೆ ಆರಂಭಿಸಿದೆ.
ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಥಿಯೇಟರ್ ಮುಂದೆ ನಿಂತು ಡ್ಯಾನ್ಸ್ ಮಾಡಿ ಖುಷಿ ಹಂಚಿದ್ದಾರೆ. ಇನ್ನು ಜೆಪಿನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಬಂದ ಫ್ಯಾನ್ಸ್ ಸಖತ್ ಖುಷಿಯಾಗಿದ್ದು, ದರ್ಶನ್ ಈ ರೀತಿ ಸಿನಿಮಾ ಮಾಡೋಕೂ ಸಾಧ್ಯನಾ ಅನ್ನುವಷ್ಟು ಚೆನ್ನಾಗಿದೆ ಎಂದು ಹೇಳಿದ್ದಾರೆ.