ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ ರೈಲು ನಿಲ್ದಾಣಕ್ಕೆ ಮರುನಾಮಕರಣವಾಗುತ್ತಿರುವ ಬೆನ್ನಿಗೇ ಈಗ ವಿಮಾನ ನಿಲ್ದಾಣ ಕೂಡಾ ಹೊಸ ಹೆಸರಿನಿಂದ ಶೋಭಿಸಲಿದೆ.
ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್ ಎಂದು ನಾಮಕರಣ ಮಾಡಲು ಚಿಂತನೆ ನಡೆದಿದೆ.
ಈ ಹಿಂದೆ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯೆ ಎಂದು ನಾಮಕರಣ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಈಗ ಮಹರ್ಷಿ ವಾಲ್ಮೀಕಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.
ಇಲ್ಲಿನ ರೈಲು ಹಾಗೂ ವಿಮಾನ ನಿಲ್ದಾಣಗಳನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.