ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತವು ಮುಂದಿನ ಐದು ವರ್ಷದಲ್ಲಿ 50 ಉಪಗ್ರಹಗಳನ್ನು ಉಡಾವಣೆ ಮಾಡುವ ಗುರಿ ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ಅವರು ಹೇಳಿದ್ದಾರೆ.
ಬದಲಾವಣೆಗಳನ್ನು ಪತ್ತೆಹಚ್ಚಲು ಉಪಗ್ರಹಗಳ ಸಾಮರ್ಥ್ಯ ಹೆಚ್ಚಿಸುವುದು ಇಸ್ರೋ ಗುರಿಯಾಗಿದೆ. ದೇಶದ ಗಡಿ ಹಾಗೂ ನೆರೆಯ ಪ್ರದೇಶಗಳ ಮೇಲೆ ನಿಗಾ ಇಡುವ ಸಾಮರ್ಥ್ಯವನ್ನು ಬಾಹ್ಯಾಕಾಶ ನೌಕೆ ಹೊಂದಿರುತ್ತದೆ. ಉಪಗ್ರಹಗಳನ್ನು ಬಳಸಿ ಇವುಗಳನ್ನು ನಿಭಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಶೀಘ್ರದಲ್ಲಿಯೇ ಜಿ-20 ಎಂಬ ಉಪಗ್ರಹ ಉಡಾವಣೆ ಮಾಡಲಾಗುವುದು, ಜಿ-20 ಅಧಿವೇಶನದ ಅಂತ್ಯದಲ್ಲಿ ಪ್ರಧಾನಿ ಮೋದಿ ಈ ಬಗ್ಗೆ ಹೇಳಲಿದ್ದಾರೆ ಎಂದು ಹೇಳಿದ್ದಾರೆ,