ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದಲ್ಲಿ ಹೊಸವರ್ಷಾಚರಣೆಯನ್ನು ನಿಷೇಧಿಸಲಾಗಿದೆ ಎಂದು ಹಂಗಾಮಿ ಪ್ರಧಾನಿ ಅನ್ವಾರುಲ್ ಹಕ್ ಕಾರಕ್ ಘೋಷಣೆ ಮಾಡಿದ್ದಾರೆ.
ಇಸ್ರೇಲ್-ಹಮಾಸ್ ಯುದ್ಧದಿಂದಾಗಿ ಗಾಜಾದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗಾಗಿ ಇದು ದನಿಯೆತ್ತುವ ಸಮಯ, ಒಗ್ಗಟ್ಟು ಪ್ರದರ್ಶಿಸೋಣ, ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸೋದು ಬೇಡ ಎಂದು ಹೇಳಿದ್ದಾರೆ.
ಪ್ಯಾಲೆಸ್ತೀನ್ ಜನರೊಂದಿಗೆ ನಾವಿದ್ದೇವೆ, ಹೊಸ ವರ್ಷಕ್ಕೆ ಯಾವುದೇ ರೀತಿ ಕಾರ್ಯಕ್ರಮಗಳನ್ನು ಯಾರೂ ಹಮ್ಮಿಕೊಳ್ಳಬೇಡಿ ಎಂದು ಹೇಳಿದ್ದಾರೆ.