ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜೆಡಿಯು (JDU) ಪಕ್ಷದ ಚುಕ್ಕಾಣಿಯಲ್ಲಿ ಶುಕ್ರವಾರ ಬದಲಾವಣೆ ಕಂಡಿದ್ದು, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಸಿಎಂ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ.
ಕಳೆದ ಒಂದು ವಾರದಿಂದ ಜೆಡಿಯುನಲ್ಲಿ ಅಧ್ಯಕ್ಷರ ರಾಜೀನಾಮೆ ಸುದ್ದಿ ಭಾರೀ ಹರಿದಾಡುತ್ತಿದ್ದು, ಇಂದು ಎಲ್ಲದಕ್ಕೂ ತೆರೆಬಿದ್ದಿದೆ.
ಶುಕ್ರವಾರ ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಜೆಡಿಯು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ ತ್ಯಾಗಿ ತಿಳಿಸಿದ್ದಾರೆ. ಈ ಮೂಲಕ ಲಲನ್ ಸಿಂಗ್ ಅವರು ಹುದ್ದೆಯಿಂದ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ನಿತೀಶ್ ಅವರನ್ನು ಪಕ್ಷದ ಉನ್ನತ ಹುದ್ದೆಗೆ ನೇಮಿಸಲಾಗಿದೆ.