ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ.

6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.

ಕೋರ್ಟ್​ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.

ಪ್ರಕರಣ ಹಿನ್ನೆಲೆ
ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು. ಆದ್ರೆ, 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ 6.60ಕೋಟಿ ಚೆಕ್​ಬೌನ್ಸ್ ಕೇಸ್ ದಾಖಲಿಸಿತ್ತು. ಆದ್ರೆ, ಮಧು ಬಂಗಾರಪ್ಪ ಅವರು ಜಾಮೀನು ಪಡೆದುಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!