ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಸಾರ್ವಜನಿಕ ರ‍್ಯಾಲಿ ನಡೆಸುವ ಅಯೋಧ್ಯೆಯ ಮೈದಾನವನ್ನು ಪರಿಶೀಲಿಸಿದ್ದಾರೆ. ಈ ಸಂಧರ್ಭ ಯೋಗಿ ಅವರು ಸೆಲ್ಫಿಯನ್ನು ಕ್ಲಿಕ್ಕಿಸಿದ್ದಾರೆ. ಶನಿವಾರ ಪ್ರಧಾನಿಯವರ ಭೇಟಿ ಹಿನ್ನೆಲೆ ಮುಖ್ಯಮಂತ್ರಿಗಳು ಇಂದು ರಾತ್ರಿ ಅಯೋಧ್ಯೆಯಲ್ಲಿ ತಂಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವೀಕರಣಗೊಂಡ ಅಯೋಧ್ಯೆ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಶನಿವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ವಿಮಾನ ನಿಲ್ದಾಣದ ಬಳಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ನೇರವಾಗಿ ಅಯೋಧ್ಯೆ ರೈಲು ನಿಲ್ದಾಣಕ್ಕೆ ತೆರಳಿ ಅಲ್ಲಿ ನವೀಕರಣಗೊಂಡ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ನಂತರ ಅವರು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಇದಾದ ಬಳಿಕ ‘ಜನಸಭೆ’ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
#WATCH | Ayodhya: UP CM Yogi Adityanath takes a selfie after inspecting the ground where PM Modi will be holding a rally tomorrow pic.twitter.com/5TQUjcmxOz
— ANI (@ANI) December 29, 2023