ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಟಿ20ಐ ನಾಯಕ ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ಬಾಲಿವುಡ್ ನಟಿ ಖುಷಿ ಮುಖರ್ಜಿ ಇತ್ತೀಚೆಗೆ ನೀಡಿದ್ದ ಹೇಳಿಕೆ ಭಾರೀ ವೈರಲ್ ಆಗಿದ್ದು, ಇದೀಗ ಇದಕ್ಕೆ ನಟಿ ಸ್ಪಷ್ಟನೆ ನೀಡಿದ್ದಾರೆ.
ಅವರ ಹೇಳಿಕೆಗಳ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ನಾವು ಸ್ನೇಹಿತರಾಗಿ ಮಾತನಾಡಲು ಸಾಧ್ಯವಿಲ್ಲವೇ?’ ಎಂದಿದ್ದಾರೆ.
ಒಂದು ದಿನದ ಹಿಂದೆ ಖುಷಿ ಮುಖರ್ಜಿ ನೀಡಿದ ಹೇಳಿಕೆ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಟಿ20 ವಿಶ್ವಕಪ್ ಕೇವಲ ಒಂದೂವರೆ ತಿಂಗಳಲ್ಲಿ ಆರಂಭವಾಗಲಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಈ ಹೊತ್ತಿನಲ್ಲಿ ನಟಿಯ ಹೇಳಿಕೆಗಳು ತಂಡದ ಪರಿಸರಕ್ಕೆ ಹಾನಿಕಾರಕವೆಂದು ಪರಿಗಣಿಸಲಾಗಿದೆ.
ಖಾಸಗಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಖುಷಿ, ‘ಸೂರ್ಯಕುಮಾರ್ ಯಾದವ್ ಜೊತೆ ಯಾವುದೇ ‘ಪ್ರಣಯ ಸಂಬಂಧ’ ಹೊಂದಿಲ್ಲ . ತನ್ನ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಮತ್ತು ಬೇರೆಯದೇ ರೀತಿಯಲ್ಲಿ ತಿರುಚಲಾಗಿದೆ. ತಮ್ಮ Instagram ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಸೂರ್ಯಕುಮಾರ್ ಯಾದವ್ ಜೊತೆ ಸ್ನೇಹಿತೆಯಾಗಿ ಮಾತನಾಡುತ್ತಿದ್ದೆ, ಈಗ ಅವರ ಸಂಪರ್ಕದಲ್ಲಿಲ್ಲ. ಈ ವಿವಾದ ಭುಗಿಲೆದ್ದ ನಂತರವೂ ನಾನು ಅವರ ಜೊತೆ ಮಾತನಾಡಿಲ್ಲ ಎಂದು ಹೇಳಿದ ಅವರು, ಮುಂಬರುವ ವಿಶ್ವಕಪ್‌ಗಾಗಿ ಟೀಂ ಇಂಡಿಯಾ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಶುಭಾಶಯಗಳನ್ನು ಕೋರಿದರು. ಸೋಲಿನ ನಂತರ ಸೂರ್ಯಕುಮಾರ್ ತನ್ನ ಜೊತೆ ಸ್ನೇಹಿತನಾಗಿ ಮಾತನಾಡಿದ್ದರು ಎಂದರು.
ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಖುಷಿ, ‘ನಾನು ಯಾವುದೇ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ. ಅನೇಕ ಕ್ರಿಕೆಟಿಗರು ನನ್ನ ಹಿಂದೆ ಇದ್ದಾರೆ. ಸೂರ್ಯಕುಮಾರ್ ನನಗೆ ತುಂಬಾ ಸಂದೇಶ ಕಳುಹಿಸುತ್ತಿದ್ದರು. ನಾವು ಈಗ ಹೆಚ್ಚು ಮಾತನಾಡುವುದಿಲ್ಲ. ನನ್ನ ಹೆಸರನ್ನು ಅವರೊಂದಿಗೆ ಜೋಡಿಸಲು ನಾನು ಬಯಸುವುದಿಲ್ಲ. ನಾನು ಇನ್ನೊಬ್ಬರೊಂದಿಗೆ ಸಂಬಂಧದಲ್ಲಿದ್ದೇನೆ ಎನ್ನುವ ಸುದ್ದಿಗಳು ನನಗೆ ಇಷ್ಟವಿಲ್ಲ’ ಎಂದು ಹೇಳಿದ್ದರು.

